ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಇದೇ 22 ರಂದು ಹುಬ್ಬಳ್ಳಿಯಲ್ಲಿ ವಿಭಾಗ ಮಟ್ಟದ 14 ವರ್ಷದವಳಗಿನ ಕ್ರಿಕೆಟ್ ಪಂದ್ಯವಾಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾಳಿಯಲ್ಲಿ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಾಬಾಗೌಡ ಪರುಗೌಡ ಪಾಟೀಲ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಸಾಧನೆಗೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು ಹಾಗೂ ಮುಖ್ಯಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Post comment