ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಇದೇ 1/11/2019 ರಂದು ಹಾಸನದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ 14 ವರ್ಷದೊಳಗಿನ ಮಕ್ಕಳಿಗಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯಲ್ಲಿ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಾಬಾಗೌಡ ಪರುಗೌಡ ಪಾಟೀಲ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇದೇ ತಿಂಗಳ ಅಂತ್ಯದಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲ್ಲಿದ್ದಾನೆ. ಈ ಸಾಧನೆಗೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು ಹಾಗೂ ಮುಖ್ಯಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Post comment