ಜಿಲ್ಲಾ ಮಟ್ಟದ ವಿಜ್ಞಾನ-ಗಣಿತ ಒಲಂಪಿಯಾಡ್ ಪರೀಕ್ಷೆ ಪ್ರತೀಕ್ಷಾ ಗದ್ದಿಗಿಮಠ ಜಿಲ್ಲೆಗೆ ಪ್ರಥಮ ಸ್ಥಾನ ರಾಜ್ಯ ಮಟ್ಟದ ಪರೀಕ್ಷೆಗೆ ಆಯ್ಕೆ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಂಯೋಜಿಸಿದ 9 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ವಿಜ್ಞಾನ- ಗಣ ತ ಒಲಂಪಿಯಾಡ್ ಪರೀಕ್ಷೆ 2019, ಬಾಲಕೀಯರ ಪದವಿ ಪೂರ್ವ ಕಾಲೇಜಿನಲ್ಲಿ ಸಪ್ಟಂಬರ 21 ರಂದು ನಡೆದ ಪರೀಕ್ಷೆಯಲ್ಲಿ ಇಟ್ಟಂಗಿಹಾಳದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಗದ್ದಿಗಿಮಠ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪರೀಕ್ಷೆಗೆ ಆಯ್ಕೆಯಾಗಿದ್ದಾಳೆ. ಈ ಸಾಧನೆಗೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು ಹಾಗೂ ಮುಖ್ಯಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Post comment