ಪರಿಸರ ಮಿತ್ರ (ಹಸಿರು) ಶಾಲೆ 2018-19 ಸಾಲಿನ ಪ್ರಶಸ್ತಿಗೆ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆ ಭಾಜನ

ಇದೇ ಮಂಗಳವಾರದಂದು ಹೇಮರಡ್ಡಿ ಮಲ್ಲಮ್ಮ ಕಾರ್ಯಲಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿಜಯಪುರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಾರ್ವಜನಿಕ ಶಿಕ್ಷಕಣ ಇಲಾಖೆ ವಿಜಯಪುರ ಸಹಯೋಗದಲ್ಲಿ ಪರಿಸರ ಮಿತ್ರ ಶಾಲಾ ಕಾರ್ಯಕ್ರಮದಲ್ಲಿ ಇಟ್ಟಂಗಿಹಾಳದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯನ್ನು ಪರಿಸರ ಮಿತ್ರ (ಹಸಿರು ಶಾಲೆ) 2018-19 ರ ವರ್ಷದ ಪ್ರಶಸ್ತಿ ಪತ್ರ ಹಾಗೂ 5000 ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ.
ಈ ಪ್ರಶಸ್ತಿಗೆ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Post comment